ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಲಾರಿ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಲಾರಿ


ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿರುವ ಘಟನೆಯೊಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ.


ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ.


ಮುಂದೆ ಹೋಗುತ್ತಿರುವ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದು, ಲಾರಿ ಹಾಗೂ ಯಂತ್ರಗಳಿಗೆ ಭಾರೀ ಹಾನಿಯಾಗಿದೆ. 


ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 Comments

Post a Comment

Post a Comment (0)

Previous Post Next Post