ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು: ಎರಡು ತಿಂಗಳ ಬಾಣಂತಿ ಸಾವು

ಪುತ್ತೂರು: ಎರಡು ತಿಂಗಳ ಬಾಣಂತಿ ಸಾವು

 


ಪುತ್ತೂರು: ಅನಾರೋಗ್ಯ ಸಮಸ್ಯೆಯಿಂದಾಗಿ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆಯೊಂದು ಪುತ್ತೂರಿನ ಕೃಷ್ಣನಗರದಲ್ಲಿ ಜೂ. 27 ರಂದು ನಡೆದಿದೆ.


ಮೃತರನ್ನು ಕೃಷ್ಣನಗರ ನಿವಾಸಿ ದಿಲೀಪ್ ರವರ ಪತ್ನಿ ಅಕ್ಷತಾ (26) ವರ್ಷ ಎಂದು ಗುರುತಿಸಲಾಗಿದೆ. ಅವರು ಪತಿ ಮತ್ತು ಎರಡು ತಿಂಗಳ ಮಗುವನ್ನು ಅಗಲಿದ್ದಾರೆ.


ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಕ್ಷತಾರವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.


ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


0 Comments

Post a Comment

Post a Comment (0)

Previous Post Next Post