ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಿಕ್ಷಕರ ನೇಮಕಾತಿಗೆ ಅರ್ಜಿ ಅಹ್ವಾನ

ಶಿಕ್ಷಕರ ನೇಮಕಾತಿಗೆ ಅರ್ಜಿ ಅಹ್ವಾನ

 


ಮಡಿಕೇರಿ:  ಈ ವರ್ಷದ (2021-22) ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕೆ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 6 ಪ್ರೌಢ ಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿ ಆರ್‍ಸಿಐ ನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತಿ ಹೊಂದಿದವರು ಜೂನ್ 30 ರಂದು ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ: 9448999344, 9448999400 ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಹಾಗೂ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم