ಧರ್ಮಸ್ಥಳ: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಸಹಯೋಗದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಡಿನಲ್ಲಿ ವನ್ಯಪ್ರಾಣಿಗಳಿಗಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಜೂ.5ರಂದು ಧರ್ಮಸ್ಥಳದಲ್ಲಿ ಚಾಲನೆ ನೀಡಲಾಯಿತು.
ರಾಜ್ಯ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹಾಗೂಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಕೆ. ಪ್ರತಾಪ ಸಿಂಹ ನಾಯಕ್, ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯಪಡೆ ಮುಖ್ಯಸ್ಥರು) ಸಂಜಯ ಮೋಹನ್, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್, ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ವಿ.ಕರಿಕಾಳನ್, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯಾ ಮೋನಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇನ್ನು ಇದೇ ವೇಳೆ ಡಬ್ಬಲ್ ಡೆಕ್ಕರ್ ಬಸ್ಸಿಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ತಾಂತ್ರಿಕ ಸಹಾಯಕ ಸುಬ್ರಹ್ಮಣ್ಯ ರಾವ್, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ ಹೆಚ್.ಎಸ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق