ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿಗಳಿಗೆ ಕಾಲೇಜ್ ಕ್ಯಾಂಪಸ್ ನಲ್ಲಿ ಕೋವಿಡ್ ಲಸಿಕೆ ಅಭಿಯಾನ

ವಿದ್ಯಾರ್ಥಿಗಳಿಗೆ ಕಾಲೇಜ್ ಕ್ಯಾಂಪಸ್ ನಲ್ಲಿ ಕೋವಿಡ್ ಲಸಿಕೆ ಅಭಿಯಾನ



ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಅಲೆ ಕಡಿಮೆಯಾಗುತ್ತಿದ್ದು, ಈ ಕಾರಣಕ್ಕೆ ಹಂತಹಂತವಾಗಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ. 


ಆದರೂ ಕೂಡ ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.


ಶಾಲೆ ಕಾಲೇಜುಗಳನ್ನು ಸಹ ಹಂತಹಂತವಾಗಿ ಆರಂಭಿಸಬೇಕೆಂಬ ತಜ್ಞರ ಸಮಿತಿ ಸಲಹೆ ನೀಡಿದ್ದು, ಮೊದಲ ಹಂತದಲ್ಲಿ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಸಿದ್ಧತೆಗಳನ್ನು ನಡೆಸುತ್ತಿದೆ. 


ಆದರೆ ಕಾಲೇಜು ಆರಂಭ ಮಾಡುವ ಮೊದಲು  ವಿದ್ಯಾರ್ಥಿಗಳು, ಬೋಧಕ - ಬೋಧಕೇತರ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡುವುದು ಅಗತ್ಯವಾಗಿದೆ.


ಈ ಕಾರಣದಿಂದ ಸರ್ಕಾರ ಜಿಲ್ಲಾಡಳಿತಗಳಿಗೆ ಕಾಲೇಜಿನ ಕ್ಯಾಂಪಸ್, ಸಮುದಾಯ ಭವನ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳು, ಬೋಧಕ - ಬೋಧಕೇತರ ಸಿಬ್ಬಂದಿಗೆ ಲಸಿಕೆ ಅಭಿಯಾನ ಕೈಗೊಳ್ಳುವಂತೆ ಸೂಚನೆ ನೀಡಿದ್ದು ಈ ಹಿನ್ನೆಲೆಯಲ್ಲಿ ಅಗತ್ಯ ತಯಾರಿ ನಡೆಯುತ್ತಿದೆ.


ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತು ಕೆಲವು ಜಿಲ್ಲೆಗಳಲ್ಲಿ ಜುಲೈ 1ರಿಂದ ಲಸಿಕೆ ಅಭಿಯಾನ ನಡೆಯಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post