ಚಿತ್ರದುರ್ಗ : ಬೈಕ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಮಂಗಳವಾರ ಮಧ್ಯಾಹ್ನ 3:40 ರ ಸುಮಾರಿಗೆ ನಡೆದಿದೆ.
ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13 ರ
ಪೊಲೀಸ್ ಗೆಸ್ಟ್ ಹೌಸ್ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ.
ಯಳಗೋಡು ಗ್ರಾಮದ ಶಿಕ್ಷಕ ಶಿವಾನಂದಪ್ಪ(58) ವರ್ಷ ಮತ್ತು ನವೀನ್(32) ವರ್ಷ ಬೈಕ್ ಹೆದ್ದಾರಿ ಮೂಲಕ ಚಿತ್ರದುರ್ಗಕ್ಕೆ ಬರುತ್ತಿರುವಾಗ ಹಿಂಬದಿಯಿಂದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಸ್ಥಳದಲ್ಲಿಯೇ ಶಿವಾನಂದ ಸಾವನ್ನಪ್ಪಿದ್ದು ಮತ್ತೊಬ್ಬ ಶಿಕ್ಷಕ ನವೀನ ಗಾಯಗೊಂಡಿದ್ದು ಅವರನ್ನು ಕೂಡಲೇ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق