ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಜಿರೆ ಗ್ರಾ.ಪಂ: ಸೀಲ್ ಡೌನ್ ನಿಮಿತ್ತ ಕೋವಿಡ್ ಕಾರ್ಯಪಡೆ ವಿಶೇಷ ಸಭೆ

ಉಜಿರೆ ಗ್ರಾ.ಪಂ: ಸೀಲ್ ಡೌನ್ ನಿಮಿತ್ತ ಕೋವಿಡ್ ಕಾರ್ಯಪಡೆ ವಿಶೇಷ ಸಭೆ


ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ  ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದ್ದು. ಇದರ ಪ್ರಯುಕ್ತ  ಕೋವಿಡ್ ಕಾರ್ಯಪಡೆಯ ವಿಶೇಷ ಸಭೆ ಜೂ.14 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿಯವರಿಂದ ಆದೇಶದ ಮೇರೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಗ್ರಾಮದ ಪ್ರವೇಶ ಗಡಿಗಳಲ್ಲಿ ಸ್ವಯಂ ಸೇವಕರನ್ನು ನೇಮಿಸಿ ,  ಜನರಿಗೆ ಅವಶ್ಯಕವಾಗಿರುವ ಅಗತ್ಯ ಸೇವೆಗಳನ್ನು ಕಾರ್ಯಪಡೆಗಳ ಮೂಲಕ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಉಜಿರೆ ಗ್ರಾಮದ ಮುಖ್ಯ ರಸ್ತೆ ಹಾಗೂ ಹಳ್ಳಿ ರಸ್ತೆಗಳಿಗೆ ಬ್ಯಾರಿ ಕೇಡ್ ಅಳವಡಿಸುವ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಜಯಂತ್ ಯು.ಬಿ., ಗ್ರಾಮಕರಣಿಕ ಪ್ರದೀಪ್, ಬೀಟ್ ಪೊಲೀಸ್ ಪುಟ್ಟ ಸ್ವಾಮಿ, ಗ್ರಾ.ಪಂ. ಸದಸ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಪಂಚಾಯತು ಸಿಬ್ಬಂದಿಗಳು ಭಾಗವಹಿಸಿದ್ದರು.


Key words: Ujire Gram Panchayat, Covid taskforce meeting


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post