ಪುಂಜಾಲಕಟ್ಟೆ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಕಾಲೇಜಿನಲ್ಲಿ ಇಂದು (ಜೂ.28) ಲಸಿಕಾ ಅಭಿಯಾನ ಯಶಸ್ವಿಯಾಗಿ ಜರುಗಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಇವರು ಲಸಿಕಾ ಅಭಿಯಾನ ಉದ್ಘಾಟಿಸಿ, ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಶಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ. ಕಲಾಮಧು, ಆಡಳಿತ ವೈದ್ಯಾಧಿಕಾರಿ ಡಾ. ವಿದ್ಯಾವತಿ, ಇಲಾಖೆಯ ಸಿಬ್ಬಂದಿಗಳಾದ ಶ್ರೀಮತಿ ಮರಿಯಮ್ಮ, ಶ್ರೀಮತಿ ಬೇಷ ಕುಮಾರಿ, ಕಮಲ, ರಂಜಿತಾ ಮತ್ತು ಗಿರೀಶ್, ಆಶಾ ಕಾರ್ಯಕರ್ತೆಯರಾದ ಅಕ್ಷಣಿ ಮತ್ತು ಲತಾ ಪಾಟೀಲ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್, ಐಕ್ಯೂಎಸಿ ಸಂಚಾಲಕರಾದ ರವಿಶಂಕರ ಬಿ, ಬೋಧಕ ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಕಾಲೇಜಿನ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಘಟಕ, ಹಾಗೂ ಭಾರತೀಯ ಯುವ ರೆಡ್ ಕ್ರಾಸ್ ಘಟಕ ಇದರ ಸ್ವಯಂಸೇವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸುಮಾರು 350 ಫಲಾನುಭವಿಗಳು ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق