ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿ ಮಾಡಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಕೊಲೆ ಮಾಡಿವ ಘಟನೆಯೊಂದು ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ.
ಕೊಲೆಯಾದ ಯುವತಿ ಗಾಯತ್ರಿ (19) ಎಂದು ತಿಳಿದು ಬಂದಿದೆ. ತಂದೆ ಜಯರಾಮ್ ಕೊಲೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ.
ಪಿಯುಸಿ ಓದುತ್ತಿದ್ದ ಗಾಯತ್ರಿ ಶಿಕ್ಷಣ ಅರ್ಧಕ್ಕೆ ನಿಲ್ಲಿಸಿ ಮನೆಯಲ್ಲಿಯೇ ಇದ್ದು, ತನ್ನ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಒತ್ತಾಯಿಸಿದ್ದರು. ಆದರೂ ಗಾಯತ್ರಿ ಯುವಕನೊಡನೆ ಒಡನಾಟ ಮುಂದುವರೆಸುತ್ತಿದ್ದಳು.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅಪ್ಪನಿಗೆ ಊಟ ತೆಗೆದುಕೊಂಡು ಗಾಯತ್ರಿ ಹೋಗಿದ್ದಳು. ಈ ವೇಳೆಯಲ್ಲಿ ಅವಳ ಪ್ರೀತಿಯ ವಿಷಯ ಪ್ರಸ್ತಾಪವಾಗಿದೆ. ನಾನು ಯಾವುದೇ ಕಾರಣಕ್ಕೂ ಯುವಕನನ್ನು ಬಿಡುವುದಿಲ್ಲ ಎಂದು ಹಠ ಮಾಡಿದ್ದಾಳೆ.
ಕೋಪಗೊಂಡ ಜಯರಾಮ್ (ತಂದೆ) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಾಡಿದ ತಪ್ಪಿಗೆ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق