ಸಾಗರ: ಬಾಲಕಿಯೋರ್ವಳ ಅಶ್ಲೀಲ ಫೋಟೋವನ್ನು ಇನ್’ಸ್ಟ್ರಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದ ಆನಂದಪುರಂ ಯುವಕನೋರ್ವನನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರಂ ಹೋಬಳಿಯ ಚೆನ್ನಶೆಟ್ಟಿಕೊಪ್ಪದ ಪ್ರದೀಪ್ (25) ಎಂಬುವವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ಯುವಕ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರ ವಿದ್ಯಾರ್ಥಿನಿಯ ಬಾಲಕಿಯೊಂದಿಗೆ ಸಲುಗೆ ಬೆಳೆಸಿಕೊಂಡು ಬಾಲಕಿಯ ಅಶ್ಲೀಲ ಚಿತ್ರಗಳನ್ನು ತೆಗೆದು ಇನ್’ಸ್ಟ್ರಾಗ್ರಾಂಗೆ ಅಪ್’ಲೋಡ್ ಮಾಡಿದ್ದ. ಹಿನ್ನೆಲೆಯಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment