ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರು: ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ, ತಾಯಿ ಮತ್ತು ಪ್ರಿಯಕರನ ಬಂಧನ

ಬೆಂಗಳೂರು: ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ, ತಾಯಿ ಮತ್ತು ಪ್ರಿಯಕರನ ಬಂಧನ



ಬೆಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿರುವ ಕಾರಣದಿಂದ ತಾಯಿ ಮತ್ತು ಆಕೆಯ ಪ್ರಿಯಕರನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಜಯಮ್ಮ (24) ಹಾಗೂ ಆಕೆ ಪ್ರಿಯಕರ ಹೇಮಂತ್ (27)​ ಬಂಧಿತ ಆರೋಪಿಗಳು. 

ಜಯಮ್ಮ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ದಿನಗೂಲಿ ನೌಕರ ಹೇಮಂತ್ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು.

ಈ ವಿಚಾರವನ್ನು ಅಪ್ರಾಪ್ತ ಮಕ್ಕಳು ತನ್ನ ತಂದೆಗೆ ತಿಳಿಸಿದ್ದರು, ಇದರಿಂದ ಕೋಪಗೊಂಡ ಜಯಮ್ಮ ಮಕ್ಕಳ ಮೇಲೆ ಸಿಟ್ಟುಗೊಂಡು, ತನ್ನ ಪ್ರಿಯಕರನ ವಿಷಯ ತಂದೆಗೆ ತಿಳಿಸಿದ್ದಕ್ಕೆ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾಳೆ.

ಸ್ವಲ್ಪವೂ ಕರುಣೆ ಇಲ್ಲದೆ ಪ್ರಿಯಕರನ ಜೊತೆ ಸೇರಿ ಇಬ್ಬರು ಹೆಣ್ಣು ಮಕ್ಕಳನ್ನು ಮನಬಂದಂತೆ ಹೊಡೆದಿದ್ದು, ತಾಯಿ, ಪ್ರಿಯಕರ ಇಬ್ಬರು ಮಕ್ಕಳನ್ನು ಕಚ್ಚಿ, ಬೆಂಕಿಯಿಂದ ಸುಟ್ಟು ವಿಕೃತಿ ಮೆರೆದಿದ್ದಾರೆ.

ಮಕ್ಕಳು ಕಿರುಚಿಕೊಳ್ಳುತ್ತಿದ್ದ ಶಬ್ದ ಕೇಳಿ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಘಟನೆ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post