ಧರ್ಮಸ್ಥಳ: ನೆರಿಯ ಗ್ರಾಮದ ಗಂಡಿಬಾಗಿಲು ಸಿಯೋನ ಆಶ್ರಮದ 200ಕ್ಕೂ ಹೆಚ್ಚು ನಿವಾಸಿಗಳಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗಾಗಿ ಧರ್ಮಸ್ಥಳ ರಜತಾದ್ರಿ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ರಜತಾದ್ರಿ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ್ದು, ಚಿಕಿತ್ಸೆ ಪಡೆಯುತ್ತಿರುವ ಸೋಂಕು ಪೀಡಿತ ಆಶ್ರಮ ನಿವಾಸಿಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ತಹಶೀಲ್ದಾರ್ ಮಹೇಶ್.ಜೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನೋಡೆಲ್ ಅಧಿಕಾರಿಗಳಾದ ಡಾ। ಜಯಕೀರ್ತಿ, ವೆಂಕಟೇಶ್, ತಾಲೂಕು ಆರೋಗ್ಯಾಧಿಕಾರಿ ಡಾ। ಕಲಾಮಧು, ಸಹಾಯಕ ಕಾರ್ಯಪಾಲ ಅಭಿಯಂತರರಾದ ಶಿವಪ್ರಸಾದ್ ಅಜಿಲ, ಕೋವಿಡ್ ಕೇರ್ ಸೆಂಟರ್‌ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ

إرسال تعليق