ಬೆಳ್ತಂಗಡಿ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದ.ಕ ಜಿಲ್ಲಾಧಿಕಾರಿ ಜೂ.1ರಂದು ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿನ ಸೌಲಭ್ಯ ಪರಿಶೀಲನೆ ಹಾಗೂ ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗೆ ದಾಖಲಾಗಿರುವ 19 ಸೋಂಕಿತರ ಪೈಕಿ ಓರ್ವರು ಮಾತ್ರ ತೀವ್ರ ನಿಗಾ ಘಟಕದಲ್ಲಿದ್ದು, ಉಳಿದವರು ಜನರಲ್ ವಾರ್ಡ್ ನಲ್ಲಿ ಇದ್ದಾರೆ. ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಔಷಧಿಗಳ ಕುರಿತು ಸೋಂಕಿತರ ಬಳಿ ವಿಚಾರಿಸಿದ್ದು, ಗುಣ್ಣ ಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ ಎಂದು ಹೇಳಿದ್ದರು.
ಹಾಗೇ ಆಕ್ಸಿಜನ್ ವ್ಯವಸ್ಥೆಯ ಸುರ್ಸಜಿತವಾಗಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರದ ವತಿಯಿಂದ ಹೆಚ್ಚುವರಿ ಆಕ್ಸಿಜನ್ ಘಟಕವನ್ನು ನಿರ್ಮಿಸಲು ಕಾರ್ಯ ಯೋಜನೆ ರೂಪಿಸಲಾಗುತ್ತಿದೆ.
ಕೊಕ್ಕಡ ಹಾಗೂ ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಯನ್ನು ಶೀಘ್ರವಾಗಿ ಪರಿಹಾರಿಸುವ ಕುರಿತು ಚರ್ಚಿಸಲಾಗಿದೆ ಎಂದಿದ್ದಾರೆ.
ಇನ್ನೂ ಹೋಂ ಐಸೋಲೋಶನ್ ಅಲ್ಲಿರುವ ಪ್ರತಿಯೋರ್ವನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದ್ದು, ಅವರ ಹಾಗೂ ಕುಟುಂಬಸ್ಥರ ಮತ್ತು ಸಮಾಜದ ಆರೋಗ್ಯದ ದೃಷ್ಟಿಯಿಂದ ಅವರು ಒಪ್ಪದಿದ್ದರೂ ಕೋವಿಡ್ ಕೇರ್ ಸೆಂಟರ್ ಗೆ ಕರೆತರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ

إرسال تعليق