ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ನ ಕೋವಿಡ್ 19 ಟಾಸ್ಕ್ ಪೋರ್ಸ್ ಸಮಿತಿ ವಿಶೇಷ ಸಭೆ ಜೂನ್ 15ರಂದು ಪಂಚಾಯತ್ ಸಭಾ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ ವಹಿಸಿದ್ದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್ ಪ್ರಕರಣ ಮತ್ತು ಕೈ ಗೊಂಡಿರುವ ಕ್ರಮ ಮುಂದೆ ಮಾಡಬೇಕಾದ ಕ್ರಮದ ಕುರಿತು ಮಾಹಿತಿ ನೀಡಿ ಸಭೆಯಿಂದ ಅಭಿಪ್ರಾಯ ಕೇಳಿಕೊಂಡರು.
ಗ್ರಾಮ ಪಂಚಾಯತ್ ಸದಸ್ಯರು, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆಕಾಶ್, ನೂತನ ವೈದ್ಯಾಧಿಕಾರಿ ಮಂಜು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ ಕೆ. ಅಶೋಕ ನಗರದ ಆರ್ಯ ದ್ರಾವಿಡ ಸಮಿತಿಯ ಶೇಖರ್ ಡಿ., ಸುರೇಶ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ನೂತನವಾಗಿ ಆಗಮಿಸಿದ ವೈದ್ಯಾಧಿಕಾರಿ ಮಂಜುರವರನ್ನು ಪಂಚಾಯತ್ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು. ಸಿಬ್ಬಂದಿ ಡಾ. ದೇವಿಪ್ರಸಾದ್ ಬೋಲ್ಮ್ ಸ್ವಾಗತಿಸಿದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق