ಕಾಪು: ವಿದ್ಯುತ್ ಅವಘಡದಿಂದ ಯುವಕನೋರ್ವ ಮೃತಪಟ್ಟ ಘಟನೆಯೊಂದು ಉದ್ಯಾವರ ಕನಕೋಡದಲ್ಲಿ ಬುಧವಾರ ಸಂಜೆ ನಡೆದಿದೆ.
ಮಲ್ಪೆ ಕೊಡವೂರು ನಿವಾಸಿ ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಪುತ್ರ ಮೋಕ್ಷಿತ್ ಕರ್ಕೇರ (25 ವರ್ಷದ ಮೃತಪಟ್ಟ ಯುವಕ.
ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕ್ಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ ಮಳೆಗೆ ವಿದ್ಯುತ್ ಇಲ್ಲದಿರುವುದನ್ನು ಕಂಡು ಮೈನ್ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ.
ವಿದ್ಯುತ್ ಶಾಕ್ ನಿಂದ ಗಂಭೀರ ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮೋಕ್ಷಿತ್ ಕರ್ಕೇರ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದ. ಬಿಡುವಿನ ವೇಳೆಯಲ್ಲಿ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು ಮಾರಾಟದ ವ್ಯವಹಾರದಲ್ಲೂ ಸಹಾಯ ಮಾಡುತ್ತಿದ್ದ. ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಇಬ್ಬರು ಪುತ್ರರಲ್ಲಿ ಮೋಕ್ಷಿತ್ ಹಿರಿಯವನಾಗಿದ್ದು, ಮನೆಗೆ ಆಧಾರವಾಗಿ ಬೆಳೆಯುತ್ತಿದ್ದ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق