ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಳಿಯ ಕೋವಿಡ್ ಟಾಸ್ಕ್ ಪೋರ್ಸ್ ಸಭೆ

ಕಳಿಯ ಕೋವಿಡ್ ಟಾಸ್ಕ್ ಪೋರ್ಸ್ ಸಭೆ



ಕಳಿಯ : ಕಳಿಯ ಗ್ರಾಮ ಮಟ್ಟದ ಪಂಚಾಯತ್ ಕೋವಿಡ್ ಟಾಸ್ಕ್ ಪೋರ್ಸ್ ಸಭೆಯು ಜೂ.14 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಕೆ,  ಅಧ್ಯಕ್ಷತೆ ವಹಿಸಿದ್ದರು. ಕಳಿಯ ಗ್ರಾಮ ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿದೆ. ಗ್ರಾಮದಲ್ಲಿ ಸೋಂಕು ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಪಾಲಿಸುವ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರು, ಟಾಸ್ಕ್ ಪೋರ್ಸಿನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ ಯವರು  ಮತ್ತು ಆಶಾ ಕಾರ್ಯಕರ್ತೆ ಯವರು, 

ವಿವಿಧ ಸಂಘದ ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಸ್ವಾಗತಿಸಿ, ಕಾರ್ಯದರ್ಶಿ ಕುಂಞ್ಞಣ್ಣ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم