ಉಜಿರೆ: ಕರ್ಣಾಟಕ ಬ್ಯಾಂಕಿನ ಸಿಇಒ ಮಹಾಬಲೇಶ್ವರ ರಾವ್ ಧರ್ಮಸ್ಥಳದಲ್ಲಿ ಬ್ಯಾಂಕಿನ ನಿರ್ದೇಶಕರಾದ ಡಿ. ಸುರೇಂದ್ರ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸಿದರು.
ಬ್ಯಾಂಕಿನ ಪ್ರಗತಿ ಮತ್ತು ಸಾಧನೆಯಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೋತ್ಸಾಹವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಬ್ಯಾಂಕಿನ ನಿರ್ದೇಶಕರಾಗಿ ಸಹಕರಿಸಿದ ಡಿ. ಸುರೇಂದ್ರ ಕುಮಾರ್ ಅವರನ್ನೂ ಅಭಿನಂದಿಸಿದರು. ಬ್ಯಾಂಕಿನ ಕಂಪೆನಿ ಕಾರ್ಯದರ್ಶಿ ಪ್ರಸನ್ನ ಪಾಟೀಲ್ ಇದ್ದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆ, ಅನಿತಾ ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಹರ್ಷೇಂದ್ರ ಕುಮಾರ್, ಶ್ರುತಾ ಜಿತೇಶ್, ನಂದೀಶ್ ಮತ್ತು ಮೈತ್ರಿ ನಂದೀಶ್ ಉಪಸ್ಥಿತರಿದ್ದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق