ಪುತ್ತೂರು: ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಷ್ಟದಲ್ಲಿದ್ದು ಕೊರೊನಾ ವಾರಿಯಾರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸಿದ ಮಾಡ್ನೂರು ಗ್ರಾಮದ ಆರೋಗ್ಯ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ದಿನಸಿ ಕಿಟ್ ವಿತರಣೆ ಕಾರ್ಯ ಕ್ರಮ ಕಾವು ಸರಯೂ ಕ್ಲಿನಿಕ್ ಬಳಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸರಯೂ ಕ್ಲಿನಿಕ್ ಮತ್ತು ಮೆಡಿಕಲ್ ಡಾ. ನವೀನಶಂಕರ್, ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶಿವಪ್ರಸಾದ್ ಕೊಚ್ಚಿ, ಮಧು ಮಲ್ಟಿಪಲ್ಸ್‌ನ ವೆಂಕಟಕೃಷ್ಣ ಎಂ.ಎನ್, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಮಳಿ ರಾಮಚಂದ್ರ ಭಟ್‌ರವರ ನೇತೃತ್ವದಲ್ಲಿ ಕಿಟ್ ವಿತರಣೆ ಮಾಡಿದರು.
Post a Comment