ಚನ್ನಪಟ್ಟಣ: ರೈಲಿಗೆ ತಲೆಕೊಟ್ಟು ಎಲ್‌ಎಲ್ ಬಿ ಪದವಿ ವಿದ್ಯಾರ್ಥಿಯೊಬ್ಬ ರಾಮನಗರ ಜಿಲ್ಲೆಯ ಚನ್ನಪಟ್ಟಣದಿಂದ ತಿಟ್ಟಮಾರನಹಳ್ಳಿಗೆ ಹೋಗುವ ರಸ್ತೆಯ ಅಂಡರ್ ಪಾಸ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಿವಾಸಿ ಸುಖೇಶ್ (19) ವರ್ಷದ ಆತ್ಮಹತ್ಯೆ ಮಾಡಿಕೊಂಡ ಯುವಕ.
ಹೊನ್ನಿಗನಹಳ್ಳಿ ಗ್ರಾಮದ ನಿವಾಸಿಯಾಗಿರುವ ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಅವರ ಪುತ್ರ ಸುಖೇಶ್, ಮೈಸೂರಿನ ಜೆಎಸ್‌ಎಸ್ ಕಾಲೇಜಿನಲ್ಲಿ ಎಲ್‌ಎಲ್ ಬಿ ವ್ಯಾಸಂಗ ಮಾಡುತ್ತಿದ್ದನು.
ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಘಟನೆ ನಡೆದ ಸ್ಥಳಕ್ಕೆ ನಗರ ಪೊಲೀಸರು ಹಾಗೂ ರೈಲ್ವೆ ಇಲಾಖೆ ಪೋಲಿಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
إرسال تعليق