ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಸರಗೋಡು:ಅನಿಲ‌ ಸಾಗಾಟದ ಟ್ಯಾಂಕರ್ ಪಲ್ಟಿ

ಕಾಸರಗೋಡು:ಅನಿಲ‌ ಸಾಗಾಟದ ಟ್ಯಾಂಕರ್ ಪಲ್ಟಿ


ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ನೀಲೇಶ್ವರದಲ್ಲಿ ಅನಿಲ ಸಾಗಾಟದ ಟ್ಯಾಂಕರ್  ಪಲ್ಟಿಯಾದ ಘಟನೆಯೊಂದು ಇಂದು ಮುಂಜಾನೆ ನಡೆದಿದೆ.


ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಕರುವಚ್ಚೇರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಅನಿಲ ಸೋರಿಕೆಯಾಗದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದರು.  


ಮಂಗಳೂರಿನ ತೈಲ ಕಂಪೆನಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಅನಿಲವನ್ನು ಇನ್ನೊಂದು ಟ್ಯಾಂಕರ್ ಗೆ ತುಂಬಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.


ಚಾಲಕ ತಮಿಳುನಾಡು ಮೂಲದ ಪಾಂಡಿ ಮತ್ತು ಇನ್ನೋರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم