ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಡ್ಯಾರ್‌ ದೋಟ: ಮಳೆ ನೀರು ಅವಾಂತರ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್‌ ದೋಟ: ಮಳೆ ನೀರು ಅವಾಂತರ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ತಕ್ಷಣ ಕಾಮಗಾರಿ ಆರಂಭಿಸಲು ಸೂಚನೆ 


ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು.

ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು ಅಡ್ಯಾರ್ ಗ್ರಾಮ ಪಂಚಾಯತ್ ನ ಪಿಡಿಒ ರವರನ್ನು ಸ್ಥಳಕ್ಕೆ ಕರೆಯಿಸಿ ಸಮಸ್ಯೆ ಬಗ್ಗೆ ಚರ್ಚೆಮಾಡಿ ಅನುದಾನವನ್ನು ಕಾಯ್ದಿರಿಸಿ ತುರ್ತಾಗಿ  ಕಾಮಗಾರಿಯನ್ನು ಮಾಡಲು ಅಧಿಕಾರಿಗಳಿಗೆ ಆದೇಶವನ್ನು ನೀಡಿದರು.

ಹಾಗೂ ಇದೇ ಸಂದರ್ಭದಲ್ಲಿ ಅಡ್ಯಾರ್ ರೆಸಾರ್ಟ್ ಗೆ ಹೋಗುವ ರಸ್ತೆ ಬದಿಯಲ್ಲಿ ಮಳೆನೀರು ಸರಾಗವಾಗಿ ಹರಿಯಲು ಚೆರಂಡಿ ರಚಿಸಲು ಅಂದಾಜು ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಅಡ್ಯಾರ್ ದೋಟ ನಾಗರಿಕರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಅಡ್ಯಾರ್ ಪಂಚಾಯತ್ ಅಧ್ಯಕ್ಷರು, ಪ್ರಮುಖರಾದ ಅಜಿಕ್ ಶೆಟ್ಟಿ. ಮಹಾಬಲ ಅಡ್ಯಾರ್, ಶ್ರವಣ್ ಆಳ್ವ.ಸದಸ್ಯರಾದ ರಝಾಕ್ ಮತ್ತು ಪಿಡಿಒ ಕೃಷ್ಣನಾಯಕ್ ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم