ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಂಕದಕಟ್ಟೆ ದೇವಸ್ಥಾನದಿಂದ ಕೊಳಂಬೆ ಶಾಲೆಯ ತನಕ ಬೇಡಮಾರು ರಸ್ತೆಯ ಅಭಿವೃದ್ಧಿ ಕಾಂಕ್ರೀಟಿಕರಣ ಮತ್ತು ಅಲ್ಲಿ ಸೇತುವೆ ನಿರ್ಮಾಣದ ಕಾಮಗಾರಿಯ ಪ್ರಗತಿಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಗುರುವಾರ ಪರಿಶೀಲಿಸಿದರು.
ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದಲ್ಲಿ ಈ ಎಲ್ಲಾ ಅಭಿವೃದ್ಧಿ ಯೋಜನೆಗಳು ನಡೆಯುತ್ತಿದ್ದು, ಈ ಹಿಂದೆ ಇದೇ ಸೇತುವೆ ಕುಸಿದಾಗ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಡಾ.ಭರತ್ ಶೆಟ್ಟಿಯವರು ಆದಷ್ಟು ಶೀಘ್ರದಲ್ಲಿ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದನ್ನು ಸ್ಮರಿಸಬಹುದು.
ಪಂಚಾಯತ್ ಅನುದಾನದಿಂದ ಸ್ಥಳೀಯರಿಗೆ ಕುಡಿಯುವ ನೀರಿನ ಯೋಜನೆಗಾಗಿ ಬೋರ್ ವೆಲ್ ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದು, ಅದನ್ನು ಕೂಡ ಶಾಸಕರು ಪರಿಶೀಲಿಸಿದರು.
ಶಾಸಕರೊಂದಿಗೆ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿಶ್ವನಾಥ ಶೆಟ್ಟಿ, ಪಂಚಾಯತ್ ಸದಸ್ಯೆ ಸವಿತಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment