ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮರವೂರು ಸೇತುವೆ ಕುಸಿತ: ಸ್ಥಳಕ್ಕೆ ಸಂಸದರು, ಶಾಸಕರ ಭೇಟಿ

ಮರವೂರು ಸೇತುವೆ ಕುಸಿತ: ಸ್ಥಳಕ್ಕೆ ಸಂಸದರು, ಶಾಸಕರ ಭೇಟಿ



ಮಂಗಳೂರು: ವಿಪರೀತ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದ ಕಾರಣ ಮರವೂರು ಸೇತುವೆ ಕುಸಿತಕ್ಕೊಳಗಾಗಿದ್ದು, ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ್ ಲೋಹಿತ್ ಅಮೀನ್, ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜೊತೆಗಿದ್ದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಬದಲಿ ರಸ್ತೆ ಕಾವೂರು, ಕುಳೂರು, ಕೆಬಿಎಸ್ ಜೋಕಟ್ಟೆ, ಪೋರ್ಕೋಡಿ, ಬಜಪೆ ಅಥವಾ ಪಚ್ಚನಾಡಿ, ವಾಮಂಜೂರು, ಗುರುಪುರ, ಕೈಕಂಬ, ಬಜಪೆ ಮಾರ್ಗವಾಗಿ ತೆರಳಬಹುದಾಗಿದೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم