ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ ಯೋಜನೆ ಮತ್ತು ಇಎಸ್‌ಐ ವಿಮೆಯಡಿಯಲ್ಲಿ ಚಿಕಿತ್ಸೆ ಪಡೆದು ಮಾಹಿತಿ ಕೊರತೆಯಿಂದಾಗಿ ಹೆಚ್ಚಿನ ಮೊತ್ತದ ಬಿಲ್ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಿರುವ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
إرسال تعليق