ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಹಡಿಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನದ ಅಂಗವಾಗಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬಡಗ ಉಳೇಪಾಡಿ ತಮ್ಮಯ್ಯ ಪೂಜಾರಿಯವರ ಜಮೀನಿನಲ್ಲಿ ಟ್ರಾಕ್ಟರ್ ಚಲಾಯಿಸುವ ಮೂಲಕ ಬುಧವಾರ ಚಾಲನೆ ನೀಡಿದರು.
ರಾಜ್ಯ ಸರಕಾರದ ಈ ಯೋಜನೆ ಕೃಷಿ ಇಲಾಖೆಯ ಮೂಲಕ ಅನುಷ್ಟಾನ ಮಾಡಲಾಗುತ್ತಿದ್ದು, ಈಗಾಗಲೇ ಶಾಸಕರು ಈ ಕುರಿತು ವಿವಿಧ ಪಂಚಾಯತ್‌ಗಳಲ್ಲಿ ಸರಣಿ ಸಭೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮತ್ತು ಯೋಜನೆಯ ಪ್ರಯೋಜನವನ್ನು ಕೃಷಿಕರು ಪಡೆಯಲು ಮಾಹಿತಿ ನೀಡುವ ಕಾರ್ಯ ಮಾಡುತ್ತಾ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಸಂದೀಪ್ ಪಚ್ಚನಾಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿಶ್ವನಾಥ ಶೆಟ್ಟಿ, ಸ್ಥಳೀಯ ಪಂಚಾಯತ್ ಅಧ್ಯಕ್ಷರಾದ ನೋಣಯ್ಯ ಕೋಟ್ಯಾನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸೋಹನ್ ಅತಿಕಾರಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಗುರುಪುರ, ಪಂಚಾಯತ್ ಉಪಾಧ್ಯಕ್ಷರುಗಳು, ಪಂ.ಸದಸ್ಯರುಗಳು, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಮಟ್ಟದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ರೈ, ಸಿಎಚ್‌ಎಸ್‌ಸಿ ಕೇಂದ್ರದ ಪ್ರಮುಖರು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق