ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 'ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ' ಯೋಜನೆ: ಪಂಚಾಯತ್‌ಗಳೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ನಿರಂತರ ಸಭೆ

'ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ' ಯೋಜನೆ: ಪಂಚಾಯತ್‌ಗಳೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ನಿರಂತರ ಸಭೆ



ಎಡಪದವು: ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಸೂಕ್ತ ಸೌಲಭ್ಯ ನೀಡಲಿದೆ. ಇದರ ಪ್ರಯೋಜನವನ್ನು ಪಡೆದು ಸರಕಾರದ "ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ" ಯೋಜನೆ ಯಶಸ್ವಿಗೊಳಿಸಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು.


ಅವರು ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆಯಲ್ಲಿ ಈ ಯೋಜನೆಯ ಸಮಗ್ರ ಮಾಹಿತಿ ನೀಡಿದರು.  ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಅದರ ಮುಂದುವರೆದ ಭಾಗವಾಗಿ ಶುಕ್ರವಾರ ಸಭೆ ನಡೆಯಿತು.


ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕುಪ್ಪೆಪದವು ಪಂಚಾಯತ್, ಮುತ್ತೂರು ಪಂಚಾಯತ್, ಕೊಂಪದವು ಪಂಚಾಯತ್, ಮುಚ್ಚೂರು ಪಂಚಾಯತ್, ಬಡಗ ಎಡಪದವು ಪಂಚಾಯತ್, ತೆಂಕ ಎಡಪದವು ಪಂಚಾಯತ್ ಮಟ್ಟದ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆ ನಡೆಯಿತು.


ಶಾಸಕರೊಂದಿಗೆ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಾಗೇಶ್ ಶೆಟ್ಟಿ, ಸ್ಥಳೀಯ ಪಂಚಾಯತ್ ಅಧ್ಯಕ್ಷರಾದ ಸುಕುಮಾರ್, ಹರೀಶ್, ಮೋಹಿನಿ, ಡೆಪ್ಯೂಟಿ ತಹಶೀಲ್ದಾರ್ ಶಿವಪ್ರಸಾದ್, ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ರೈ, ಪಂಚಾಯತ್ ಉಪಾಧ್ಯಕ್ಷರುಗಳು, ಸದಸ್ಯರುಗಳು, ಕೃಷಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪಿಡಿಒಗಳು, ಗ್ರಾಮ ಕರಣಿಕರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم