ರೇಖಾಚಿತ್ರ: ಮನೋಹರ ಆಚಾರ್ಯ-MAZ foundation
ಬೆಂಗಳೂರು: ಕನ್ನಡದ ಪ್ರಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ಶುಕ್ರವಾರ ಸಂಜೆ ವಿಧಿವಶರಾಗಿದ್ದಾರೆ.
ಕೊರೋನಾ ಸೋಂಕಿಗೆ ಒಳಗಾಗಿದ್ದ ಸಿದ್ದಲಿಂಗಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದಲಿತ ಕವಿ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದರು.
ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ’ಮಾಗಡಿ’ ತಾಲ್ಲೋಕಿನ ’ಮಂಚನಬೆಲೆ’ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.
ಗ್ರಾಮ ದೇವತೆಗಳು ಎಂಬ ವಿಚಾರದ ಬಗ್ಗೆ ಪಿಎಚ್’ಡಿ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق