ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುಧರ್ಮಾ ಪತ್ರಿಕೆ ಸಂಪಾದಕ ಕೆ.ವಿ.ಸಂಪತ್ ಕುಮಾರ್ ನಿಧನ

ಸುಧರ್ಮಾ ಪತ್ರಿಕೆ ಸಂಪಾದಕ ಕೆ.ವಿ.ಸಂಪತ್ ಕುಮಾರ್ ನಿಧನ

 


ಮೈಸೂರು: ಸುಧರ್ಮಾ ಪತ್ರಿಕೆ ಸಂಪಾದಕರಾದ ಕೆ.ವಿ. ಸಂಪತ್ ಕುಮಾರ್ (64) ಅವರು  ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


ಸುಧರ್ಮಾ ಪತ್ರಿಕೆ ವಿಶ್ವದ ಏಕೈಕ ಸಂಸ್ಕೃತ ದೈನಿಕವಾಗಿದ್ದು, ಕಳೆದ ನಾಲ್ಕು ದಶಕಗಳಿಂದ ಸುಧರ್ಮಾ ಪತ್ರಿಕೆಯನ್ನು ಮುನ್ನಡೆಸುತ್ತಾ ಬಂದಿದ್ದರು.


 ಈ ಮೂಲಕ ಸಂಸ್ಕೃತ ಭಾಷೆಯ ಉಳಿವಿಗೆ ಶ್ರಮ ಪಟ್ಟವರು.  ಸಂಸ್ಕೃತ ಸೇವೆ ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.


ಮಧ್ಯಾಹ್ನ ತಮ್ಮ ಕಚೇರಿಯಲ್ಲಿ ಸಂಸ್ಕೃತ ಪತ್ರಿಕೆಯ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ನಿಧನರಾದರು.

0 Comments

Post a Comment

Post a Comment (0)

Previous Post Next Post