ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುರತ್ಕಲ್ ಆಟೋ, ಟ್ಯಾಕ್ಸಿ ಚಾಲಕರಿಗೆ ವ್ಯಾಕ್ಸಿನ್ ಡ್ರೈವ್ ಕಾರ್ಯಕ್ರಮ: ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

ಸುರತ್ಕಲ್ ಆಟೋ, ಟ್ಯಾಕ್ಸಿ ಚಾಲಕರಿಗೆ ವ್ಯಾಕ್ಸಿನ್ ಡ್ರೈವ್ ಕಾರ್ಯಕ್ರಮ: ಶಾಸಕ ಡಾ.ಭರತ್ ಶೆಟ್ಟಿ ಚಾಲನೆ


ಮಂಗಳೂರು: ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ  ಆಟೋ, ಟ್ಯಾಕ್ಸಿ ಚಾಲಕರಿಗೆ ಲಸಿಕೆ ಅಭಿಯಾನಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಚಾಲನೆ ನೀಡಿದರು.


ಈ ಸಂದರ್ಭ ಮಾತನಾಡಿದ ಅವರು ರಿಕ್ಷಾ ಸಹಿತ ಚಾಲಕ ವರ್ಗ ಜನ ಸಾಮಾನ್ಯರೊಂದಿಗೆ ನಿರಂತರ ಸಂಪರ್ಕ ಹೊಂದಿರುತ್ತಾರೆ. ಚಾಲಕರು ಪಡೆದುಕೊಂಡಲ್ಲಿ ಪ್ರಯಾಣಿಕರಿಗೂ ಧೈರ್ಯ ಬರುತ್ತದೆ. ಈ ನಿಟ್ಟಿನಲ್ಲಿ ಮಂಗಳೂರು ಉತ್ತರ ಕ್ಷೇತ್ರದಾದ್ಯಂತ ಈ ಅಭಿಯಾನ  ನಡೆಸಲಾಗುತ್ತಿದೆ ಎಂದರು. ಸರ್ವರಿಗೂ ಲಸಿಕೆ ಸಿಗುವಂತಾಗಲು ಆನ್ ಲೈನ್ ಜತೆಗೆ ಸ್ಥಳದಲ್ಲೇ ನೋಂದಣಿ ಮಾಡಿ ಪಡೆಯಬಹುದಾಗಿದೆ ಎಂದರು. ದೇಶದ ಅತೀ ದೊಡ್ಡ ಲಸಿಕಾ ಮೇಳ ಇದಾಗಿದೆ ಎಂದರು.




ಆಟೋ ಚಾಲಕರಿಗೆ ಲಸಿಕೆ ಅಭಿಯಾನಕ್ಕೆ ಅವಕಾಶ ಮಾಡಿಕೊಟ್ಟ ಶಾಸಕರಿಗೆ ಸಂಘದ ಗೌರವಾಧ್ಯಕ್ಷ ಭಾಸ್ಕರ ರಾವ್ ಬಾಳ, ಸುಧಾಕರ್, ಟ್ಯಾಕ್ಸಿ ಚಾಲಕರ ಪರವಾಗಿ ಸುರೇಶ್, ಹಾಗೂ ಬಿಎಂಸ್ ಪರವಾಗಿ ಉಮೇಶ್ ಇಡ್ಯಾ ಅವರು ಕೃತಜ್ಞತೆ ಅರ್ಪಿಸಿದರು.


ಕಾರ್ಯಕ್ರಮದಲ್ಲಿ ಭಾಜಪಾ  ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮನಪಾ ಸದಸ್ಯರುಗಳು, ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಕಾವೂರಿನಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಲಸಿಕೆ ಅಭಿಯಾನ

ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಕಾವೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆಯಿತು.


ಶಿಬಿರದಲ್ಲಿ ಉಪಮೇಯರ್ ಸುಮಂಗಲಾ ರಾವ್, ಭಾಜಪಾ ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾ ನಗರ ಪಾಲಿಕೆ ಸದಸ್ಯರುಗಳು, ಪಕ್ಷದ ವಿವಿಧ ಸ್ತರದ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post