ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ ಹಿನ್ನೆಲೆ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅರಕೆರೆ ಬಳಿಯ ಬಿಟಿಎಸ್ ಲೇಔಟ್ನಲ್ಲಿ ನಡೆದಿದೆ.
ತಮಿಳುನಾಡು ಮೂಲದ ಮಣಿ (36) ವರ್ಷದ ಕೊಲೆಯ ಮಾಡಿದ ಆರೋಪಿ.
ಮಣಿ ಹಾಗೂ ಆತನ ಪತ್ನಿ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಮಣಿ ಅಕ್ರಮ ಸಂಬಂಧ ಶಂಕೆಯಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Post a Comment