ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಅವರು ಜುಲೈ 1ರಂದು ಜಿಲ್ಲಾ ಪ್ರವಾಸವನ್ನು ಕೈ ಗೊಂಡಿದ್ದಾರೆ.
ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮೈಸೂರು ಜಿಲ್ಲೆಯ ವಿಶೇಷ ಅಭಿವೃದ್ಧಿ ಯೋಜನೆ ಅನುದಾನ ಬಳಕೆ, ಸ್ಥಳೀಯ ಶಾಸಕರ ಪ್ರದೇಶಾಭಿವದ್ಧಿ ಅನುದಾನ ಬಳಕೆ ಹಾಗೂ ಬೆಳೆ ವಿಮೆ ಪರಿಹಾರ ಪಾವತಿಯ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಸಂಜೆ ವೇಳೆಯಲ್ಲಿ 5.30ಕ್ಕೆ ಸರಿಯಾಗಿ ಕ್ರೀಡಾ ವಸತಿ ನಿಲಯ ಮತ್ತು ಕ್ರೀಡಾಂಗಣಕ್ಕೆ ಭೇಟಿ ನೀಡುವರು. ಬಳಿಕ ಸಂಜೆ 6 ಗಂಟೆಗೆ ಮೈಸೂರು ಜಿಲ್ಲೆ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.
Post a Comment