ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ನಿಧನ

ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ನಿಧನ



ಉಡುಪಿ : ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಇಂದು ನಿಧನರಾಗಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ.

2020ರ ನ. 24 ರಂದು ಉಡುಪಿ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದ ಇವರು, ಪಡುಬಿದ್ರೆ ಬೀಚ್ ಗೆ ಬ್ಲೂ ಫ್ಲ್ಯಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ಇವರು ಇದಕ್ಕೂ ಮೊದಲು ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು.


Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم