ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ: ಸಾಮಾಜಿಕ ಹೋರಾಟಗಾರ ಸುನೀಲ್ ಕಬ್ರಾಲ್ ಶಿರ್ವ ಕೋವಿಡ್ ಸೋಂಕಿಗೆ ಬಲಿ

ಉಡುಪಿ: ಸಾಮಾಜಿಕ ಹೋರಾಟಗಾರ ಸುನೀಲ್ ಕಬ್ರಾಲ್ ಶಿರ್ವ ಕೋವಿಡ್ ಸೋಂಕಿಗೆ ಬಲಿ

 
ಉಡುಪಿ: ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದ ಸುನೀಲ್ ಕಬ್ರಾಲ್ ಶಿರ್ವ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.


ಹಲವು ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿದ್ದ ಸುನೀಲ್ ಅವರು ಇತ್ತೀಚೆಗಷ್ಟೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.


ಸಾಮಾಜಿ ಸಂಘಟನೆಯಾದ ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ನ ಸ್ಥಾಪಕ ಅಧ್ಯಕ್ಷರಾಗಿದ್ದ ಅವರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರಾಗಿ, ಶಿರ್ವ ಚರ್ಚಿನ ಪಾಲನಾ ಮಂಡಳಿಯ ಸದಸ್ಯರಾಗಿ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದರು.


ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಕೂಡ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮೃತ ಸುನೀಲ್ ಅವರು ಪತ್ನಿ ಬೊನಿಟಾ ಹಾಗೂ ಅಪಾರ ಬಂಧು-ಬಳಗದವರನ್ನು ಆಗಲಿದ್ದಾರೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post