ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಸ್‌ ಸಿಬ್ಬಂದಿ, ಆಟೋ ಚಾಲಕರಿಗಾಗಿ ನಾಳೆ (ಜೂ.19) ಲಸಿಕಾ ಅಭಿಯಾನ

ಬಸ್‌ ಸಿಬ್ಬಂದಿ, ಆಟೋ ಚಾಲಕರಿಗಾಗಿ ನಾಳೆ (ಜೂ.19) ಲಸಿಕಾ ಅಭಿಯಾನ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ ಕ್ರಾಸ್‌ ಘಟಕ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಜಂಟಿಯಾಗಿ ನಗರದ ಬಸ್‌ ಸಿಬ್ಬಂದಿ  ಮತ್ತು ಆಟೋ ಚಾಲಕರಿಗೆ ಕೊವಿಡ್‌- 19 ಲಸಿಕಾ ಅಭಿಯಾನವನ್ನು ವಿವಿ ಕಾಲೇಜಿನ ಆವರಣದಲ್ಲಿ ಜೂನ್‌ 19 (ಶನಿವಾರ) ಬೆಳಗ್ಗೆ 10 ಗಂಟೆಗೆ ಆಯೋಜಿಸಿವೆ.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅಭಿಯಾನ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ ಆಫ್‌ ಬರೋಡಾದ ಪ್ರಧಾನ ವ್ಯವಸ್ಥಾಪಕಿ ಮತ್ತು ವಲಯ ಮುಖ್ಯಸ್ಥೆ ಗಾಯತ್ರಿ ಆರ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ರೆಡ್‌ ಕ್ರಾಸ್‌ ಸೊಸೈಟಿಯ ಮುಖ್ಯಸ್ಥ ಸಿ ಎ ಶಾಂತಾರಾಮ ಶೆಟ್ಟಿ ಅತಿಥಿಗಳಾಗಿರಲಿದ್ದಾರೆ.


ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ ಕ್ರಾಸ್‌ ಘಟಕದ ನೋಡಲ್‌ ಅಧಿಕಾರಿ ಡಾ. ಗಣಪತಿ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم