ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ದ.ಕ ಸೇರಿ NRI ಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನ ಹಮ್ಮಿಕೊಂಡಿದ್ದು ಕೆನರಾ ಹೈಸ್ಕೂಲಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಭಾಗವಹಿಸಿ ಈ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿದೇಶದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರು ಮತ್ತೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಾಗ ಅವರಿಗೆ ಲಸಿಕೆ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಅಂತವರಿಗೆ ಈ ಅವಕಾಶ ಉತ್ತಮವಾಗಿದೆ ಎಂದು ಶಾಸಕರು ಶ್ಲಾಘನೆ ವ್ಯಕ್ತಪಡಿಸಿದರು.
ರೆಡ್ ಕ್ರಾಸ್ ಜಿಲ್ಲಾಧ್ಯಕ್ಷರಾದ ಸಿಎ ಶಾಂತಾರಾಮ್ ಶೆಟ್ಟಿ, ರೆಡ್ ಕ್ರಾಸ್ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment