ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯೋಗ ಮತ್ತು ಆರೋಗ್ಯ: ಆನ್‌ಲೈನ್ ವಿಶೇಷ ಉಪನ್ಯಾಸ

ಯೋಗ ಮತ್ತು ಆರೋಗ್ಯ: ಆನ್‌ಲೈನ್ ವಿಶೇಷ ಉಪನ್ಯಾಸ



ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಆಂತರಿಕ ಗುಣಮಟ್ಟ ಭರವಸೆ ಕೋಶ ಇದರ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇಂದು (ಜೂ.21) ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಾಘವೇಂದ್ರ ರಾವ್, ಜಿಲ್ಲಾ ಪ್ರಭಾರಿ, ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇವರು ಯಮ, ನಿಯಮ, ಆಸನ, ಪ್ರಾಣಾಯಾಮ, ಧ್ಯಾನ ಮುಂತಾದ ಹಲವಾರು ವಿಧಾನಗಳ ಮೂಲಕ ಆರೋಗ್ಯದ ಗುಟ್ಟನ್ನು ತಿಳಿಸಿದರು ಮತ್ತು ಪ್ರಾಣಾಯಾಮದ ಪ್ರಾತ್ಯಕ್ಷಿಕೆಯನ್ನು ಮಾಡಿದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ .ಕೆ .ಗಣಪತಿ ಭಟ್ ಇವರು ಮಾತನಾಡಿ, ವಿದ್ಯಾರ್ಥಿಗಳು ಯೋಗಾಭ್ಯಾಸ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಕಾಲೇಜಿನ ಪ್ರಾಧ್ಯಾಪಕ ವೃಂದದವರು ಮತ್ತು 80 ವಿದ್ಯಾರ್ಥಿಗಳು ಭಾಗವಹಿಸಿದ್ದರು.  ಐಕ್ಯೂಎಸಿ ಸಂಚಾಲಕರಾದ ಪ್ರೊ ರವಿಶಂಕರ ಬಿ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೊ ಸಂತೋಷ್ ಪ್ರಭು ಎಂ ವಂದನಾರ್ಪಣೆಗೈದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post