ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಾಗಲಕೋಟೆ ; ಪ್ರಸಿದ್ಧಿ ಪಡೆದ ಉರಗ ರಕ್ಷಕ ಹಾವು ಕಚ್ಚಿಸಿಕೊಂಡು ಸಾವು

ಬಾಗಲಕೋಟೆ ; ಪ್ರಸಿದ್ಧಿ ಪಡೆದ ಉರಗ ರಕ್ಷಕ ಹಾವು ಕಚ್ಚಿಸಿಕೊಂಡು ಸಾವು

 


ಬಾಗಲಕೋಟೆ: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ಹಿಡಿದಿದ್ದ ಉರಗ ರಕ್ಷರೊಬ್ಬ ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಸಮೀಪ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ.


ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ವ್ಯಕ್ತಿ. ಬುಧವಾರ ರಾತ್ರಿ ಗ್ರಾಮದಲ್ಲಿ ಹಾವು ಕಾಣ ಸಿಕ್ಕಿದ್ದು, ನಂತರ ವಿಷಯ ತಿಳಿದ ಸದಾಶಿವ ಕರಣಿ, ಅಲ್ಲಿಗೆ ಧಾವಿಸಿ ಹಾವನ್ನು ಹಿಡಿದಿದ್ದರು.


ಹಾವನ್ನು ಹಿಡಿಯುವ ವೇಳೆ ಸದಾಶಿವ ಅವರಿಗೆ ಕಚ್ಚಿತ್ತು. ನಂತರ ಸದಾಶಿವ ಅವರು ಮನೆಯಲ್ಲಿಯೇ ಗಿಡಮೂಲಿಕೆಗಳ ಔಷಧಿ ತೆಗೆದುಕೊಂಡಿದ್ದರು.  


ಆದರೆ ನಿನ್ನೆ ಮಧ್ಯರಾತ್ರಿ ಹಾವಿನ ವಿಷ ಹೆಚ್ಚಾಗಿ ಸಾವನ್ನಪ್ಪಿದ್ದಾರೆ. ಸದಾಶಿವ ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಕೆಲಸದಲ್ಲಿ ಭಾರೀ ಪ್ರಸಿದ್ಧಿಯನ್ನು ಪಡೆದಿದ್ದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم