ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 4 ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಪುರಸ್ಕಾರ ಲಭಿಸಿದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ನವದೆಹಲಿ ಇವರು ಆಯೋಜಿಸಿದ ಗೋಲ್ಡನ್ ಆ್ಯರೋ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 4 ಬುಲ್ ಬುಲ್ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕ್ಯಾಪ್ಟನ್ ಪ್ರಮೀಳಾ ಇವರು ತರಬೇತಿಯನ್ನು ನೀಡಿದ್ದು, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ. ಆರ್ . ಸಂಪೂರ್ಣ ಸಹಕಾರವನ್ನು ನೀಡಿರುತ್ತಾರೆ.
Post a Comment