ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮ ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನ ಸಂಭಾಗಣದಲ್ಲಿ ನಡೆಯಿತು. ಇದೇ ವೇಳೆ ಕಾಲೇಜಿನಲ್ಲಿ ಸ್ಮಾರ್ಟ್ ತರಗತಿ ಕೊಠಡಿಗಳನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಲಾಕ್ ಡೌನ್ ಹಿನ್ನಲೆ ಆನ್ ಲೈನ್ ಕ್ಲಾಸ್‌ಗಳು ಅನಿವಾರ್ಯವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಆಗಬೇಕೆಂಬ ದೃಷ್ಟಿಯಿಂದ ರಾಜ್ಯ ಸರ್ಕಾರದ ಆಶಯದಂತೆ ಡಿಜಿಟಲ್ ಕಲಿಕೆಯ ಅಂಗವಾಗಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಟ್ಯಾಬ್ಲೆಟ್ ಪಿಸಿಗಳ ಸದುಪಯೋಗ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಾಂಕೇತಿಕವಾಗಿ 10 ವಿದ್ಯಾರ್ಥಿಗಳಿಗೆ ಟ್ಯಾಬ್‌ಲೆಟ್ ಪಿಸಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿ ಭಟ್ ಕುಳಮರ್ವ ಇವರು ವಹಿಸಿದ್ದರು. ಡಾ.ವಿಶಾಲ್ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿದರು.
ಐಕ್ಯೂಎಸಿ ಸಂಚಾಲಕ ಪ್ರೊ. ರವಿಶಂಕರ್‌ರವರು ವಂದಿಸಿದರು. ಬೋಧಕರು ಹಾಗೂ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
إرسال تعليق