ಬೆಳ್ತಂಗಡಿ: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಜೂ.7ರಂದು ಪ್ರಧಾನಿ ನರೇಂದ್ರ ಮೋದಿ ಜೂ ಘೋಷಿಸಿದ್ದರು.
ಈ ಹಿನ್ನಲೆ ಜೂ.21ರಂದು ದೇಶಾದ್ಯಂತ "ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ" ಎಂಬ ವಿಶ್ವದ ಅತಿ ದೊಡ್ಡ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆತ್ತಿದ್ದು, ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿಯು ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಶಾಸಕ ಹರೀಶ್ ಪೂಂಜಾ, ತಾಲೂಕು ಆರೋಗ್ಯಾಧಿಕಾರಿ ಕಲಾಮದು, ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment