ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗೃಹರಕ್ಷಕ ದಳದ ಸಿಬ್ಬಂದಿಗಳು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಬಡ ಕುಟುಂಬಗಳಿ ಕಿಟ್ ವಿತರಿಸಿದ ವಸಂತ್ ಬಂಗೇರ

ಗೃಹರಕ್ಷಕ ದಳದ ಸಿಬ್ಬಂದಿಗಳು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಬಡ ಕುಟುಂಬಗಳಿ ಕಿಟ್ ವಿತರಿಸಿದ ವಸಂತ್ ಬಂಗೇರ


 ಬೆಳ್ತಂಗಡಿ: ಕೋವಿಡ್ ಸಂತ್ರಸ್ತರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ 50 ಪಲ್ಸ್ ಆಕ್ಸಿಮೀಟರ್‌ಗಳನ್ನು ದೇಣಿಗೆ ನೀಡಿದರು.

ಇದೇ ವೇಳೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಆಶಾ ಸಾಲಿಯಾನ್ ಸಭಾಂಗಣದಲ್ಲಿ ಇಂದು ನಡೆದ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ತಾಲೂಕಿನ 16 ಮಂದಿ ಪೌರ ಕಾರ್ಮಿಕರು, 70 ಮಂದಿ



ಗೃಹರಕ್ಷಕ ದಳದ ಸಿಬ್ಬಂದಿಗಳು ಹಾಗೂ 15 ಅರ್ಹ ಬಡ ಕುಟುಂಬಗಳಿಗೆ ಆಹಾರದ ಕಿಟ್ ಮತ್ತು ಮಾಸ್ಕ್ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ, ಅವರ ಪುತ್ರಿಯರಾದ ಪ್ರೀತಿತಾ ವಿಜೇತ್‌ಮತ್ತು ಧರ್ಮವಿಜೇತ್ ದಂಪತಿ, ಬಿನುತಾ ಸಂಜೀವ್ ಮತ್ತು ಸಂಜೀವ್ ದಂಪತಿ ಕಾನೆಕ್ಕಲ್, ಮೊಮ್ಮಕ್ಕಳಾದ ಪೂರ್ವಿಕಾ, ವೇದಾಂತ್ ಸುಬ್ರಹ್ಮಣ್ಯ ಮತ್ತು ಖುಷಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ ಗೌಡ, ಬಿ.ಕೆ ವಸಂತ್, ಅನೂಪ್ ಜೆ ಬಂಗೇರ, ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಡಿ ಜನಾರ್ದನ ಕುಲಾಲ್, ನ್ಯಾಯವಾದಿ ಮನೋಹರ್ ಕುಮಾರ್ ಇಳಂತಿಲ, ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ, ಪೌರಕಾರ್ಮಿಕರು, ಗೃಹರಕ್ಷಕ ದಳದ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.

0 Comments

Post a Comment

Post a Comment (0)

Previous Post Next Post