ಈ ಲಸಿಕಾ ಮಹಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದಲ್ಲಿ ಇಂದು ಒಂದೇ ದಿನ 7 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದಿದ್ದಾರೆ.
18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಕೇಂದ್ರದ ಮೂಲಕ ಕೋವಿಡ್ ಲಸಿಕೆ ನೀಡುತ್ತಿರುವುದು ಸಂತೋಷದ ವಿಷಯ. ರಾಜ್ಯದಲ್ಲಿ ಇಂದು 7 ಲಕ್ಷ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಲಸಿಕೆ ಸರಬರಾಜು ಮಾಡಲಾಗಿದೆ. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಆದಷ್ಟು ಬೇಗ ಕೊವೀಡ್ ಕೊನೆಯಾಗಿ ಜನರು ನೆಮ್ಮದಿಯಿಂದ ಬದುಕಲಿ ಎಂದು ದೇವರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
https://twitter.com/CMofKarnataka/status/1406818667069800461?s=20
ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ದಿನವಾಗಿರುವ ಇಂದು ಲಸಿಕಾ ಮೇಳದ ಮೂಲಕ ದೇಶದೆಲ್ಲರಿಗೂ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕರ್ನಾಟಕದಲ್ಲಿ ಇಂದು ಒಂದೇ ದಿನ 7 ಲಕ್ಷ ಕೊರೋನಾ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
https://twitter.com/CMofKarnataka/status/1406820242207117315?s=20
18 ವರ್ಷ ಮೇಲ್ಪಟ್ಟವರು ಮೊದಲ ಡೋಸ್, 45 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಲಸಿಕೆ ಪಡೆಯಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಕೊರೋನಾ ಲಸಿಕೆ ನೀಡಿ, ಕೋವಿಡ್ನಿಂದ ಮುಕ್ತರನ್ನಾಗಿಸುವ ಗುರಿ ನಮ್ಮ ಸರ್ಕಾರದ್ದು ಎಂದು ಹೇಳಿದ್ದಾರೆ.
إرسال تعليق