ಗಂಗಾವತಿ: ವಿವಾಹಿತ ಮಹಿಳೆ ಮೇಲೆ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ನಡೆದಿದೆ.
30 ವರ್ಷದ ವಿವಾಹಿತ ಮಹಿಳೆ ಗೆ ಅದೇ ಗ್ರಾಮದ ದುರ್ಗಾರಾವ್ ನಾಗೇಶ್ವರರಾವ (37) ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆ ಕೂಗಿದ್ದರಿಂದ ಜನರು ಬಂದು ಯುವಕನನ್ನು ಥಳಿಸಿದ್ದಾರೆ.
ಯುವಕನನ್ನು ಬಂಧಿಸಿದ್ದು, ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ತಿಳಿಸಿದ್ದಾರೆ.
Post a Comment