ಚಿತ್ರದುರ್ಗ: ಟ್ರ್ಯಾಕ್ಟರ್ ಚಾಲನಾ ಪರವಾನಗಿ ಪಡೆದು ಜಮೀನು ಉಳುಮೆ ಮಾಡಿದ ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೃಷಿ ಮಹಿಳೆ ಎಸ್.ವಿ.ಸುಮಂಗಲಮ್ಮ (69) ಅವರು ಹೃದಯಾಘಾತದಿಂದ ಬುಧವಾರ ನಿಧನರಾದರು.
ಇವರಿಗೆ ಪತಿ ವೀರಭದ್ರಪ್ಪ, ಪುತ್ರ ಹಾಗೂ ಪುತ್ರಿ ಇದ್ದಾರೆ. ತೋಟದಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೂಲತಃ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಸುಮಂಗಲಮ್ಮ ಮತ್ತು ವೀರಭದ್ರಪ್ಪ ದಂಪತಿ ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸುಮಾರು 70 ಎಕರೆ ಒಣ ಭೂಮಿಯಲ್ಲಿ ತೆಂಗಿನ ತೋಟ ನಿರ್ಮಿಸಿ ಮಾದರಿಯಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿದ ರಾಜ್ಯ ಸರ್ಕಾರ 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
إرسال تعليق