ಶಿವಮೊಗ್ಗ: ಸಿಗಂದೂರು ಲಾಂಚ್‌ನಿಂದ ಶರಾವತಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಇಂದು ನಡೆದಿದೆ.
ರೇಣುಕಾ ಎಂಬ ಹಾವೇರಿ ಜಿಲ್ಲೆಯ ಮಹಿಳೆ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನವನ್ನು ಪಡೆದು, ಹಿಂತಿರುಗಿ ಬರುವಾಗ ಹೊಳೆಯ ಮಧ್ಯಭಾಗದಲ್ಲಿ ನೀರಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.
ಲಾಂಚ್‌ನ ಸಿಬ್ಬಂದಿಗಳು ಹಾಗೂ ಸ್ಥಳೀಯರು ತಕ್ಷಣವೇ ಸೇಫ್ಟಿ ಟ್ಯೂಬ್ ಬಳಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಲಾಂಚಿನಲ್ಲಿ ಅವರಿಗೆ ಪ್ರಾರ್ಥಮಿಕ ಆರೈಕೆಯನ್ನು ಮಾಡಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment