ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ನಾಳೆಯಿಂದ ಎಲ್ಲ ಅಂಗಡಿಗಳು ಓಪನ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ನಾಳೆಯಿಂದ ಎಲ್ಲ ಅಂಗಡಿಗಳು ಓಪನ್

 


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಅಂದರೆ ಜೂ.23ರಿಂದ ಬೆಳಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಬೆ.7 ಗಂಟೆಯಿಂದ ಮ.2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಲು ಅವಕಾಶ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಪ್ರತಿಯೊಂದು ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಸದ ನಳಿನ್ ಮತ್ತು ಎಲ್ಲಾ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಿದ್ದಾರೆ.


0 Comments

Post a Comment

Post a Comment (0)

Previous Post Next Post