ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಪರಿಸರ ದಿನಾಚರಣೆ

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಪರಿಸರ ದಿನಾಚರಣೆ



ಉಜಿರೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಲ್ಲಿನ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಪ್ರಗತಿ ಪರ ಕೃಷಿಕ ಇಚ್ಚಾವು ಬಾಬಣ್ಣ ಗೌಡರ ಕೃಷಿ ಜಾಗದಲ್ಲಿ ತೆಂಗಿನ ಗಿಡ, ಮಾವು ಹಲಸು ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5 ರಂದು ಸಾಂಕೇತಿಕವಾಗಿ ಆಚರಿಸಲಾಯಿತು.

ಮುಂದಿನ ದಿನಗಳಲ್ಲಿ ಅತ್ತಾಜೆ ಕೆರೆಯ ಸುತ್ತ ಮುತ್ತ ಮೂರು ಸಾವಿರ ಗಿಡ ನೆಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ತಾ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ನರೇಗಾ ಯೋಜನೆಯ ಸಂಯೋಜಕಿ ಸುನಿತಾ, ತಾ. ಪ. ಪ್ರಭಾರ ಎ. ಡಿ. ಸಫನ, ಸ್ಥಳೀಯ ಗ್ರಾ.ಪಂ. ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم