ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಕ ಜಿಲ್ಲಾಡಳಿತ ಮತ್ತು ಹೋಟೆಲ್ ಅಸೋಸಿಯೇಷನ್‌ ವತಿಯಿಂದ ಉಚಿತ ಲಸಿಕೆ ವಿತರಣೆ

ದಕ ಜಿಲ್ಲಾಡಳಿತ ಮತ್ತು ಹೋಟೆಲ್ ಅಸೋಸಿಯೇಷನ್‌ ವತಿಯಿಂದ ಉಚಿತ ಲಸಿಕೆ ವಿತರಣೆ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಹೋಟೆಲ್ ಅಸೋಸಿಯೇಷನ್ (ರಿ) ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಶನಿವಾರ ನಗರದ ದೀಪಾ ಕಂಫರ್ಟ್ಸ್ ಸಭಾಂಗಣದಲ್ಲಿ ಉಚಿತ ಕೋವಿಡ್ ಲಸಿಕೆ ಶಿಬಿರ ನಡೆಯಿತು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಮ.ನ.ಪಾ. ಮುಖ್ಯ ಸಚೇತಕರು ಹಾಗೂ ಸ್ಥಳೀಯ ಕಾರ್ಪೊರೇಟರ್  ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಿ ಪ್ರಶಂಸೆ ವ್ಯಕ್ತಪಡಿಸಿ ಶುಭ ಕೋರಿದರು.


ಹೋಟೆಲ್ ಅಸೋಸಿಯೇಷನ್ ಮಂಗಳೂರಿನ ಗೌರವಾಧ್ಯಕ್ಷರಾದ ರಾಜ್ ಗೋಪಾಲ್ ರೈ ಅವರು ಮಾತನಾಡಿ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಕೆಲವರು ಇನ್ನೂ ಭಯ ಪಡುತ್ತಾರೆ, ಆದರೆ ಆತಂಕಗೊಳ್ಳುವ ಅಗತ್ಯವಿಲ್ಲ.  ಪ್ರತಿಯೊಬ್ಬರೂ ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮೂಲಕ ಆರೋಗ್ಯವಂತರಾಗಿ ಕೋವಿಡ್ ಸೋಂಕಿನಿಂದ ದೂರವಿರಲು ಸಾಧ್ಯವಾಗುತ್ತದೆ. ಹೋಟೆಲ್ ನ ಎಲ್ಲಾ ಕಾರ್ಮಿಕರಿಗೆ ಲಸಿಕೆ ಹಾಕಿಸುವ ಮೂಲಕ ಗ್ರಾಹಕರಿಗೆ ಆಗಮಿಸಲು ಮತ್ತಷ್ಟು ಧೈರ್ಯ ತುಂಬುತ್ತದೆ. 


ಕೊವಿಡ್ ನ ಸಂಕಷ್ಟದ ಸಂಧರ್ಭದಲ್ಲಿ ಕಾರ್ಮಿಕರ ಆರೋಗ್ಯ ಹಾಗೂ ಹಿತಾಸಕ್ತಿ ಕಾಪಾಡಿಕೊಳ್ಳುವಲ್ಲಿ ಹೋಟೆಲ್ ಅಸೋಸಿಯೇಷನ್ ನ ಪದಾಧಿಕಾರಿಗಳು ಹೋಟೆಲ್ ಮಾಲಿಕರ ಜೊತೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡಿದ್ದು ಸದಾ ಸ್ಪಂದಿಸುತ್ತಿದ್ದಾರೆ.


ಇದೀಗ ಎರಡನೆ ಬಾರಿಗೆ ಕಾರ್ಮಿಕರಿಗೆ ಲಸಿಕೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದರು.


ಶಿಬಿರಕ್ಕೆ ಆಗಮಿಸಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ರವರು ಹೋಟೆಲ್ ಅಸೋಸಿಯನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Key words: Covid vaccination, Hotel Association, Dakshina Kannada, ಕೋವಿಡ್ ಲಸಿಕೆ, ಲಸಿಕೆ ವಿತರಣೆ

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post