ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜಲಜೀವನ್ ಮಿಷನ್: ಲಾಯಿಲ-ಕುಂಟಿನಿಯಲ್ಲಿ 30 ಲಕ್ಷ ವೆಚ್ಚದ ಟ್ಯಾಂಕ್‌ಗೆ ಶಿಲಾನ್ಯಾಸ

ಜಲಜೀವನ್ ಮಿಷನ್: ಲಾಯಿಲ-ಕುಂಟಿನಿಯಲ್ಲಿ 30 ಲಕ್ಷ ವೆಚ್ಚದ ಟ್ಯಾಂಕ್‌ಗೆ ಶಿಲಾನ್ಯಾಸ





ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಟಿನಿ ಎಂಬಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ ರೂ.30 ಲಕ್ಷ ರೂ ಅನುದಾನದಲ್ಲಿ ನೂತನ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜೂ.1 ರಂದು ಜರುಗಿತು.

ನಾಗರಿಕರ ಬಹುದಿನಗಳ ಬೇಡಿಕೆಯಾದ ನಳ್ಳಿ ನೀರಿನ ಸರಬರಾಜು ಮಾಡಲು ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಲಾಯಿಲ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಸೌಮ್ಯಲತಾ ಜಯಂತ ಗೌಡರವರ ಮನವಿ ಮೇರೆಗೆ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ  ತುರ್ತು ಸಂದರ್ಭದಲ್ಲಿ  ಟ್ಯಾಂಕ್ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಜಲಜೀವನ್ ಮಿಷನ್ ಅಡಿಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸುಮಾರು ರೂ. 12 ಕೋಟಿ ವೆಚ್ಚದಲ್ಲಿ ಅನೇಕ ಟ್ಯಾಂಕ್ ಗಳು, ನೀರಾವರಿಗೆ ಸಂಬಂಧಪಟ್ಟ ಪೈಪ್ ಲೈನ್ ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೊರೊನಾ ಮಹಾಮಾರಿಯ ಸಂಕಷ್ಟದ ಸಮಯದಲ್ಲೂ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸಿ ಈ ಭಾಗದ ಜನರ ನೀರಿನ ಸಮಸ್ಯೆಯನ್ನು  ಪರಿಹರಿಸಲಾಗುವುದು. ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಕಾಮಗಾರಿಯಲ್ಲಿ ಕಳಪೆಯಾಗದಂತೆ ಗ್ರಾ.ಪಂ. ಸದಸ್ಯರು ಗಮನ ಹರಿಸಿ ಉತ್ತಮ ಗುಣಮಟ್ಟದ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಲಾಯಿಲ ಗ್ರಾ. ಪಂ ಅಧ್ಯಕ್ಷೆ ಆಶಾ ಬೆನಡಿಕ್ಟ ‌ ಸಲ್ದಾನ, ಉಪಾಧ್ಯಕ್ಷ ಗಣೇಶ್, ಗ್ರಾ.ಪಂ. ಸದಸ್ಯರುಗಳು, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲ್ಮಂಜ, ಗ್ರಾ.ಪಂ ಮಾಜಿ ಉಪಾಧ್ಯಕ್ಷ  ಗಿರೀಶ್ ಡೋಂಗ್ರೆ, ಸುಧಾಕರ, ಗ್ರಾ.ಪಂ. ಕಾರ್ಯದರ್ಶಿ ಪುಟ್ಟಸ್ವಾಮಿ, ಲೆಕ್ಕ ಸಹಾಯಕಿ ರೇಶ್ಮಾ ಜಿ ಗಂಜಿಗಟ್ಟಿ, ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್ ಪಿಡಿಒ ವೆಂಕಟಕೃಷ್ಣರಾಜ್ ಕಾರ್ಯಕ್ರಮ ನಿರ್ವಹಿಸಿದರು.


Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 Comments

Post a Comment

Post a Comment (0)

Previous Post Next Post