ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿ ವಾಹಿನಿಯಿಂದ ಯೋಗ ದಿನಾಚರಣೆ

ವಿದ್ಯಾರ್ಥಿ ವಾಹಿನಿಯಿಂದ ಯೋಗ ದಿನಾಚರಣೆ



ಬದಿಯಡ್ಕ: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯ ಪ್ರೇರಣೆ ಮತ್ತು ಮಾರ್ಗದರ್ಶನದಲ್ಲಿ ಕಾರ್ಯಪ್ರವೃತ್ತವಾಗಿರುವ ಹವ್ಯಕ ಮಹಾ ಮಂಡಲಾಂತರ್ಗತ ಮುಳ್ಳೇರಿಯ ಮಂಡಲ ವಿದ್ಯಾರ್ಥಿ ವಾಹಿನಿಯ ಆಶ್ರಯದಲ್ಲಿ ಅಂತರ್ಜಾಲ ವೆಬಿನಾರ್ ಮೂಲಕ ವಿಶ್ವ ಯೋಗ ದಿನಾಚರಣೆ ನಡೆಯಿತು.


ಮುಳ್ಳೇರಿಯ ಮಂಡಲ ಅಧ್ಯಕ್ಷರಾದ ಶ್ರೀ ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಮಹಾಮಂಡಲ ವಿದ್ಯಾರ್ಥಿ ವಾಹಿನೀ ಪ್ರಧಾನೆ ಶ್ರೀಮತಿ ಸಂಧ್ಯಾ ಕಾನತ್ತೂರು ಶುಭ ಹಾರೈಸಿದರು. ನಿವೃತ್ತ ಪ್ರಾಂಶುಪಾಲರೂ ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಶ್ರೀ ವಿಶ್ವೇಶ್ವರ ಭಟ್ಟ ಉಂಡೆಮನೆ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ಮತ್ತು ಸಂವಾದವನ್ನು ನಡೆಸಿಕೊಟ್ಟರು.


ಬದಿಯಡ್ಕ ಶ್ರೀಭಾರತೀ ವಿದ್ಯಾಪೀಠದ ವಿದ್ಯಾರ್ಥಿನಿಯರಾದ ಧರಣಿ ಸರಳಿ ಮತ್ತು ದಶಮಿ ಸರಳಿ ಪ್ರಾರ್ಥನೆ ಹಾಡಿದರು. ಮುಳ್ಳೇರಿಯ ಮಂಡಲ ಸಂಘಟನಾ ಕಾರ್ಯದರ್ಶಿ ಶ್ರೀ ಕೇಶವಪ್ರಸಾದ ಎಡಕ್ಕಾನ ಸ್ವಾಗತಿಸಿ ಶ್ರೀ ಗುರುಮೂರ್ತಿ ಮೇಣ ವಂದಿಸಿದರು. ಕು. ಪ್ರಗತಿ ಕೋಡ್ಮಾಡು ಕಾರ್ಯಕ್ರಮ ನಿರೂಪಣೆಗೈದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

1 تعليقات

إرسال تعليق

Post a Comment

أحدث أقدم